ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆ ಇಂದು ಮತ್ತೆ ಚುರುಕುಗೊಂಡಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಹಾಗೂ ಕುಲಕರ್ಣಿ ಅವರ ಡೈರಿ ಉಸ್ತುವಾರಿ ನಟರಾಜ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ವಿನಯ್ ಸಹೋದರ - Dharwad Latest News Update
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆ ಹಿನ್ನೆಲೆ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ವಿಜಯ್ ಕುಲಕರ್ಣಿ ಹಾಗೂ ಡೈರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಟರಾಜ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗಾಗಿ ಕರೆಸಿಕೊಂಡಿದ್ದಾರೆ. ಸಿಬಿಐ ವಶದಲ್ಲಿರುವ ವಿನಯ್ ಸೋದರಮಾವ ಚಂದ್ರಶೇಖರ ಇಂಡಿ ಅವರನ್ನು ಸಹ ವಿಚಾರಣೆಗೊಳಪಡಿಸಿ, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.
ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ವಿಜಯ್ ಕುಲಕರ್ಣಿ ಹಾಗೂ ಡೈರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಟರಾಜ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗಾಗಿ ಕರೆಸಿಕೊಂಡಿದ್ದಾರೆ. ಸಿಬಿಐ ವಶದಲ್ಲಿರುವ ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಸಹ ವಿಚಾರಣೆಗೊಳಪಡಿಸಿ, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.
ಇನ್ನೂ ಹಲವರನ್ನು ಕರೆಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ. ನ್ಯಾಯಾಂಗ ಬಂಧನದಲ್ಲಿದ್ದ ಚಂದ್ರಶೇಖರ ಇಂಡಿ ಅವರನ್ನು ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಅವರನ್ನು ವಿಚಾರಣೆ ನಡೆಸಿ ಇಂದು ಸಂಜೆ 5 ಗಂಟೆಯೊಳಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ.