ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದಾರೆ.
ಧಾರವಾಡ ಯೋಗೀಶಗೌಡ ಕೊಲೆ ಪ್ರಕರಣ: ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದ ಸಿಬಿಐ - ಸಿಬಿಐ ಅಧಿಕಾರಿಗಳು
ಧಾರವಾಡ ಜಿ.ಪಂ. ಸದಸ್ಯರಾಗಿದ್ದ ಯೋಗೀಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದಾರೆ.

ಯೋಗೀಶಗೌಡ ಕೊಲೆ
ಸಿಬಿಐ ಅಧಿಕಾರಿಗಳು 4 ಜನ ಕೊಲೆ ಆರೋಪಿಗಳನ್ನು ಸ್ಥಳಕ್ಕೆ ಕರೆತಂದು ಮಹಜರು ಮಾಡಿದ್ದಾರೆ. ನಿನ್ನೆಯಷ್ಟೇ ನ್ಯಾಯಾಲಯದ ಆದೇಶದ ಮೇರೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದರು.
2016ರಲ್ಲಿ ಧಾರವಾಡ ಸಪ್ತಾಪೂರ ಜಿಮ್ನಲ್ಲಿ ಯೋಗೀಶ್ಗೌಡ ಕೊಲೆ ನಡೆದಿತ್ತು. ಅದೇ ಸ್ಥಳಕ್ಕೆ ಆರೋಪಿಗಳನ್ನು ಕರೆತಂದು ಸಿಬಿಐ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.