ಹುಬ್ಬಳ್ಳಿ :ಸಾಲಕ್ಕೆ ಹೆದರಿ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನಲ್ಲಿ ನಡೆದಿದೆ. ಮೊರಬ ಗ್ರಾಮದ ಶ್ರೀನಿವಾಸ ರೆಡ್ಡಿ ಮಾಸ್ತಿ ಎಂಬುವರು ಮೃತ ರೈತ. ಈತ ಖಾಸಗಿ ಬ್ಯಾಂಕ್ನಲ್ಲಿ ₹14 ಲಕ್ಷ ಹಾಗೂ ತಂದೆಯ ಹೆಸರಲ್ಲಿ ₹50 ಸಾವಿರ ಬೆಳೆ ಸಾಲ ಮಾಡಿದ್ದರು.
ಇದನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಈತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.