ಧಾರವಾಡ:ಲಾಡ್ಜ್ನಲ್ಲಿ ಯುವಕ ಹಾಗೂ ಯುವತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್ಗೆ ತೆರಳಿದ್ದರು. ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಧಾರವಾಡ: ಲಾಡ್ಜ್ನಲ್ಲಿ ಒಟ್ಟಿಗೆ ನೇಣಿಗೆ ಶರಣಾದ ಯುವಕ, ಯುವತಿ - ನವಲಗುಂದ ಪೊಲೀಸ್ ಠಾಣೆ
ಲಾಡ್ಜ್ನಲ್ಲಿ ಯುವಕ, ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ.
ಧಾರವಾಡ: ಲಾಡ್ಜ್ನಲ್ಲಿ ಒಟ್ಟಿಗೆ ನೇಣಿಗೆ ಶರಣಾದ ಯುವಕ, ಯುವತಿ
ಯುವಕ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದವ ಎನ್ನಲಾಗಿದೆ. ಇಬ್ಬರ ನಡುವಿನ ಪ್ರೀತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವುದೇ ಆತ್ಮಹತ್ಯೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಹೊಸಕೋಟೆ: ಹೋಮ್ ವರ್ಕ್ ಮಾಡದ್ದಕ್ಕೆ ಪೋಷಕರು ಬೈದರೆಂದು ಬಾಲಕ ಆತ್ಮಹತ್ಯೆ