ಹುಬ್ಬಳ್ಳಿ:ಮನೆಯಲ್ಲಿ ಮೂರು ದಿನಗಳ ಹಿಂದೆ ಚೇಳು ಕಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳದ ಯುವಕ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾಗಿದ್ದಾನೆ.
ಮೃತ ಯುವಕ ಹೆಬ್ಬಳ್ಳಿ ಗ್ರಾಮದ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ಆತನಿಗೆ ಚೇಳು ಕಚ್ಚಿದೆ. ಹೀಗಿದ್ರೂ ಸಹ ನಿರ್ಲಕ್ಷ್ಯ ವಹಿಸಿದ್ದಾನೆ. ಮೂರು ದಿನವಾದರೂ ಸಹ ಚಿಕಿತ್ಸೆ ಪಡೆಯದೇ ಮನೆಯಲ್ಲಿದ್ದ. ಬಳಿಕ ನಿಧಾನವಾಗಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.