ಧಾರವಾಡ: ವಯಸ್ಸಾದರೂ ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.
ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ - ಮದುವೆಗೆ ಕನ್ಯೆ ಸಿಗದ ಹಿನ್ನೆಲೆ ಮನನೊಂದ ಯುವಕ
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಮದುವೆಗೆ ಕನ್ಯೆ ಸಿಗದ ಹಿನ್ನೆಲೆ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಧಾರವಾಡ
ಸಂತೋಷ ಕೊರಡಿ ಸ್ಮಶಾನದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ. ವಯಸ್ಸಾದರೂ ನನಗೆ ಮದುವೆಯಾಗಿಲ್ಲ ಎಂದು ಮನನೊಂದ ಈತ, ಗ್ರಾಮದ ಸ್ಮಶಾನದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಯುವಕನನ್ನು ಗಮನಿಸಿದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಸಂತೋಷ್ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುವುದಿಲ್ಲವೆಂದು ಬೆಳಗಾವಿಯ ಯುವ ರೈತ ಆತ್ಮಹತ್ಯೆ!