ಧಾರವಾಡ:ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ವಯಸ್ಸಿನ ಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಧಾರವಾಡದ ಯುವಕನೋರ್ವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ.
ತಾಲೂಕಿನ ತಿಮ್ಮಾಪೂರ ಗ್ರಾಮದ ಯುವಕ ಮೈಲಾರ ಕಳೆದ ಮೂರು ವರ್ಷದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿದ್ದಾರೆ. ಒಂದೆರಡು ಸಲ ಕೆಲ ಅಂಕಗಳಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಹೀಗಾಗಿ ಇದೇ ಏಪ್ರಿಲ್ 25 ರಂದು ಆತನ ವಯೋಮಿತಿ ಮುಕ್ತಾಯಗೊಳ್ಳುತ್ತದೆ. ಅಷ್ಟರೊಳಗೆ ವಯಸ್ಸಿನ ಮಿತಿ ಹೆಚ್ಚಳ ಮಾಡಬೇಕು. ಇಲ್ಲವೇ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.