ಧಾರವಾಡ: ವಿದ್ಯುತ್ ಸ್ಪರ್ಶಿಸಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ಮಂಜುಳಾ ಪೂಜಾರ (21) ಎಂಬ ಯುವತಿ ಸಾವನ್ನಪ್ಪಿದ್ದು, ಮೃತ ಯುವತಿ ದಾಸನಕೊಪ್ಪ ಗ್ರಾಮದವಳಾಗಿದ್ದು ನರೇಂದ್ರ ಗ್ರಾಮದ ತನ್ನ ದೊಡ್ಡಪ್ಪನ ಮನೆಯಲ್ಲಿದ್ದಳು.

ಮನೆಯಲ್ಲಿ ಸ್ವಿಚ್ ಬದಲಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದಳು. ತಕ್ಷಣ ಆಕೆಯನ್ನು ಧಾರವಾಡದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.
ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.