ಕರ್ನಾಟಕ

karnataka

ETV Bharat / state

ಕಾರು ಪಲ್ಟಿ: ಯರಗಟ್ಟಿ ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರ ಸಾವು - ಯರಗಟ್ಟಿ ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ

ಕಾರು ಪಲ್ಟಿಯಾಗಿ ಯರಗಟ್ಟಿ ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಯರಗಟ್ಟಿ ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ
ಯರಗಟ್ಟಿ ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ

By

Published : Oct 11, 2022, 10:56 AM IST

ಧಾರವಾಡ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ಅಮ್ಮಿನಬಾವಿ ಬಳಿ ಇಂದು ಸಂಭವಿಸಿದೆ.

ಯರಗಟ್ಟಿ-ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯಶವಂತ ಸೋಮಶೇಖರ ಯಲಿಗಾರ ಹಾಗೂ ಜೊತೆಗಿದ್ದ ಮತ್ತೋರ್ವ ಸಾವಿಗೀಡಾಗಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಾರು ಪಲ್ಟಿ

ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.

(ಓದಿ: ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ.. ಮಹಾರಾಷ್ಟ್ರದಲ್ಲಿ ಕರ್ನಾಟಕ ಮಹಿಳೆಯ ದಾರುಣ ಅಂತ್ಯ)

ABOUT THE AUTHOR

...view details