ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹದ ಪ್ರಕರಣದಲ್ಲಿ ಹು - ಧಾ ಮಹಾನಗರ ಪೊಲೀಸ್ ಆಯುಕ್ತರು ಮೃಧು ಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ. ಕೂಡಲೇ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಯುವ ವಕೀಲರ ಸಂಘದಿಂದ ಇಂದು ಕೋರ್ಟ್ ಎದುರಗಡೆ ಪ್ರತಿಭಟನೆ ಮಾಡಲಾಯಿತು.
ಹು -ಧಾ ಮಹಾನಗರ ಪೊಲೀಸ್ ಆಯುಕ್ತರ ಅಮಾನತಿಗೆ ಒತ್ತಾಯ: ಯುವ ವಕೀಲರ ಸಂಘ ಆಗ್ರಹ - ಹು-ಧಾ ಮಹಾನಗರ ಪೊಲೀಸ್ ಆಯುಕ್ತರು
ಪಾಕ್ ಪರ ಘೋಷಣೆ ಕೂಗಿದವರ ಮೇಲೆ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು ಮೃಧು ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಯುವ ವಕೀಲರ ಸಂಘದಿಂದ ಇಂದು ಕೋರ್ಟ್ ಎದುರಗಡೆ ಪ್ರತಿಭಟನೆ ಮಾಡಲಾಯಿತು.
ಯುವ ವಕೀಲರ ಸಂಘದ ವತಿಯಿಂದ ಪ್ರತಿಭಟನೆ
ನಗರದಲ್ಲಿಂದು ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಯುವ ವಕೀಲರ ಸಂಘದ ಅಧ್ಯಕ್ಷ ಅಶೋಕ ಅನ್ವೇಕರ್, ದೇಶದ್ರೋಹದ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ಮೃಧು ಧೋರಣೆ ಅನುಸರಿಸುವ ಮೂಲಕ ದೇಶದ್ರೋಹದ ಆರೋಪಿತರಿಗೆ ರಕ್ಷಣೆ ನೀಡಿರುವುದು ಖಂಡನೀಯವಾಗಿದೆ.
ರಾಜ್ಯದಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಪೊಲೀಸ್ ಇಲಾಖೆಯ ನಡೆಯೇ ಕಾರಣವಾಗಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ದೇಶದ್ರೋಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಹು-ಧಾ ಮಹಾನಗರ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ರು.