ಧಾರವಾಡ: ಕೆಲವು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುಗದ ಗ್ರಾಮದಲ್ಲಿ ನಡೆದಿದೆ.
ಹೊಟ್ಟೆನೋವು ತಾಳಲಾರದೆ ಬಾಲಕ ಆತ್ಮಹತ್ಯೆ - Dharwad Crime news
ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕನೋರ್ವ ಧಾರವಾಡ ತಾಲೂಕಿನ ಮುಗದ ಗ್ರಾಮದ ಹೈಸ್ಕೂಲ್ ಆವರಣದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕ
ಮಹೇಶ ಬಸವರಾಜ ಗಡೆಪ್ಪನವರ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಈತ, ನೋವು ತಾಳಲಾರದೆ ಇಂದು ಬೆಳಗ್ಗೆ ಗ್ರಾಮದ ಹೈಸ್ಕೂಲ್ ಆವರಣದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಸುಮಾ ನಾಯಕ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.