ಹುಬ್ಬಳ್ಳಿ:ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಲಾಕ್ಡೌನ್ ಮಾಡಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕೆಲ ಯುವಕರು ದಂಡದಿಂದ ತಪ್ಪಿಸಿಕೊಳ್ಳಲು ಕುದುರೆ ಮೊರೆ ಹೋಗಿದ್ದಾರೆ.
ರಾಜ್ಯ ಸರ್ಕಾರ ಲಾಕ್ಡೌನ್ ಮಾಡಿ ಅಗತ್ಯ ವಸ್ತುಗಳನ್ನು ಕೊಳ್ಳಲು ಮಾತ್ರ ಅವಕಾಶ ಕಲ್ಪಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಯುವಕರು ವಾಹನದ ಬದಲು ಕುದುರೆ ಸವಾರಿ ಮಾಡಿ ಸಂಚರಿಸುತ್ತಿದ್ದಾರೆ.