ಕರ್ನಾಟಕ

karnataka

ETV Bharat / state

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ವದಂತಿ: ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಭೇಟಿ, ಪರಿಶೀಲನೆ - Hubblli news

ಕಳೆದ ರಾತ್ರಿ ನೃಪತುಂಗ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನೆಲೆ ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Nrupatunga Hill
ನೃಪತುಂಗ ಬೆಟ್ಟಕ್ಕೆ ವಲಯ ಅರಣ್ಯಾಧಿಕಾರಿ ಭೇಟಿ

By

Published : Sep 16, 2021, 2:15 PM IST

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂಬ ವದಂತಿ ಕೇಳಿಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಎಸ್.ಎಂ.ತೆಗ್ಗಿನಮನಿ, ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಲಭ್ಯವಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸಲಾಗಿದೆ ಎಂದರು.

ನೃಪತುಂಗ ಬೆಟ್ಟಕ್ಕೆ ವಲಯ ಅರಣ್ಯಾಧಿಕಾರಿ ಭೇಟಿ

ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಬೋನ್ ಇಡಲಾಗಿತ್ತಾದರೂ ಚಿರತೆ ಪತ್ತೆಯಾಗಿರಲಿಲ್ಲ. ಇದೀಗ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದೆ.

ಈ ಹಿನ್ನೆಲೆಯಲ್ಲಿ ಚಿರತೆ ಬಂದಿತ್ತೋ ಅಥವಾ ಬೇರೆ ಯಾವುದಾದರೂ ಪ್ರಾಣಿ ಬಂದಿತ್ತೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಚಿರತೆ ನಗರ ಪ್ರವೇಶಿಸುವಾಗ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಟ್ರ್ಯಾಕ್ ಹಾಗೂ ವಿಮಾನ ನಿಲ್ದಾಣ ಸೇರಿದಂತೆ ಹಲವು ಜನದಟ್ಟಣೆ ಪ್ರದೇಶ ದಾಟಿ ಬರಬೇಕಿದೆ. ಹೀಗಾಗಿ ಚಿರತೆ ಇರುವ ಬಗ್ಗೆ ಖಚಿತವಾಗಿ ಹೇಳಲು ಆಗುವುದಿಲ್ಲ ಎಂದರು.

ABOUT THE AUTHOR

...view details