ಹುಬ್ಬಳ್ಳಿ :ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೇಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮಗೌಡ ಅವರ ವಿಚಾರಣೆ ಇಂದು ಮತ್ತೆ ಮುಂದುವರೆದಿದೆ.
ಸೋಮಲಿಂಗ ನ್ಯಾಮಗೌಡ, ವಿನಯ ಕುಲಕರ್ಣಿ ಸಚಿವರಿದ್ದ ವೇಳೆ ಆಪ್ತ ಕಾರ್ಯದರ್ಶಿಯಾಗಿದ್ದರು. ಸೋಮಲಿಂಗ ನ್ಯಾಮಗೌಡ ಅವರನ್ನು ಕಳೆದ ಮೂರು ದಿನಗಳಿಂದ ಸಿಬಿಐ ವಿಚಾರಣೆ ನಡೆಸುತ್ತಿದೆ. ನಿನ್ನೆ ವಿನಯ ಕುಲಕರ್ಣಿ ಹಾಗೂ ಸೋಮಲಿಂಗ ಇಬ್ಬರನ್ನೂ ಮುಖಾಮುಖಿ ವಿಚಾರಣೆ ಮಾಡಿದ್ದ ಸಿಬಿಐ ಅಧಿಕಾರಿಗಳು, ಇಂದು ಮತ್ತೆ ವಿಚಾರಣೆಗಾಗಿ ಸಿಎಆರ್ ಮೈದಾನಕ್ಕೆ ಕರೆದುಕೊಂಡು ಬಂದಿದ್ದಾರೆ.