ಧಾರವಾಡ: ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕೆಲಸಗಳಿಗೆ ಸಿಇಒ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಇಒ ಡಾ. ಸುಶೀಲಾ ಅವರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಸದಸ್ಯರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಜಿಪಂ ಸಿಇಒ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉಪಾಧ್ಯಕ್ಷ ನರೇಗಾ ಯೋಜನೆಯಲ್ಲಿ ಪೇವರ್ಸ್ ಹಾಗೂ ಚೆಕ್ ಡ್ಯಾಂ, ಗೋದಾಮು ನಿರ್ಮಾಣ, ಶಾಲಾ ಕಾಂಪೌಂಡ್, ಶಾಲಾ ಆಟದ ಮೈದಾನ ನಿರ್ಮಾಣ ಮಾಡುವುದು ಅತೀ ಅವಶ್ಯವಿದ್ದರೂ ಸಹ ಕಾಮಗಾರಿಗಳಿಗೆ ಅನುಮೋದನೆ ನೀಡುತ್ತಿಲ್ಲ. ಜಿಲ್ಲೆಯ ಹಲವಾರು ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲು ಸಭೆ ಕರೆದರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಅವರು ಸ್ಪಂದಿಸುತ್ತಿಲ್ಲಾ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಬಡವರ ಫ್ರಿಡ್ಜ್ಗೆ ಬಂತು ಭಾರಿ ಬೇಡಿಕೆ; ಮಾರಾಟಗಾರರ ಮುಖದಲ್ಲಿ ಮಂದಹಾಸ!