ಗದಗ: ಜಿಲ್ಲೆಯಲ್ಲಿ ಇಂದು 105 ಜನರಿಗೆ ಕೊರೊನಾ ಸೋಂಕು ದೃಢಪಟ್ಟು ಒಟ್ಟು ಸೋಂಕಿತರ ಸಂಖ್ಯೆ 2071ಕ್ಕೆ ತಲುಪಿದೆ.
ಗದಗ: 105 ಜನರಿಗೆ ಸೋಂಕು ದೃಢ....ಇಬ್ಬರು ಬಲಿ! - Gadag corona news
ಜಿಲ್ಲೆಯಲ್ಲಿಂದು 105 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಗು 75 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
DC sundareshababu
ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪುವ ಮೂಲಕ ಮೃತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಇನ್ನೂ 75 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 968 ಸೋಂಕಿತರು ಗುಣಮುಖರಾಗಿರುತ್ತಾರೆ.
ಸದ್ಯ 1058 ಸೋಂಕಿತರು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ತಿಳಿಸಿದ್ದಾರೆ.