ಗದಗ : 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಇದ್ದ ಹಿನ್ನೆಲೆಯಲ್ಲಿ ಆಕೆ ಚಿಕಿತ್ಸೆ ಪಡೆದಿದ್ದ ಎರಡು ಖಾಸಗಿ ಆಸ್ಪತ್ರೆಗಳನ್ನು ಜಿಲ್ಲಾಡಳಿತ ಸೀಜ್ ಮಾಡಿದೆ.
ಗದಗದ 2 ಖಾಸಗಿ ಆಸ್ಪತ್ರೆಗಳನ್ನು ಸೀಜ್ ಮಾಡಿದ ಜಿಲ್ಲಾಡಳಿತ..
ರೋಗಿ 607 ದ್ವಿತೀಯ ಸಂಪರ್ಕ ಹೊಂದಿದ 40 ಜನರನ್ನು ಪತ್ತೆ ಮಾಡಲಾಗಿದೆ. ಇದರಲ್ಲಿ 20 ಜನರ ಥ್ರೋಟ್ ಸ್ವ್ಯಾಬ್ ತಪಾಸಣೆಗೆ ಕಳುಹಿಸಲಾಗಿದೆ.
ರೋಣ ಪಟ್ಟಣದ 2 ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ರೋಗಿ ಗರ್ಭಿಣಿ ಚಿಕಿತ್ಸೆ ಪಡೆದಿದ್ದಳು. ಹೀಗಾಗಿ ಚಿಕಿತ್ಸೆ ನೀಡಿದ ಎರಡು ಆಸ್ಪತ್ರೆಗಳನ್ನು ಸೀಜ್ ಮಾಡಲಾಗಿದೆ. ಎರಡೂ ಆಸ್ಪತ್ರೆಗಳ ಇಬ್ಬರು ವೈದ್ಯರು ಹಾಗೂ ಓರ್ವ ಲ್ಯಾಬ್ ಟೆಕ್ನಿಶಿಯನ್ನ ಕ್ವಾರಂಟೈನ್ಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರೋ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ, ರೋಣ ತಹಶಿಲ್ದಾರ್ಗೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚಿಸಿದ್ದೆ.
ಹೀಗಾಗಿ ಎರಡು ಆಸ್ಪತ್ರೆಗಳನ್ನು ಸೀಜ್ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ರೋಗಿ 607 ದ್ವಿತೀಯ ಸಂಪರ್ಕ ಹೊಂದಿದ 40 ಜನರನ್ನು ಪತ್ತೆ ಮಾಡಲಾಗಿದೆ. ಇದರಲ್ಲಿ 20 ಜನರ ಥ್ರೋಟ್ ಸ್ವ್ಯಾಬ್ ತಪಾಸಣೆಗೆ ಕಳುಹಿಸಲಾಗಿದೆ. ಆಸ್ಪತ್ರೆಗಳನ್ನು ಸೀಜ್ ಮಾಡಿರೋ ಕುರಿತು ಸ್ಪಷ್ಟ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ತಿಳಿಸಿದ್ದಾರೆ.