ಗದಗ: 6ನೇ ವೇತನ ಆಯೋಗ ಜಾರಿಗಾಗಿ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದ ನಡುವೆಯೂ ನಗರದ ಪಂ.ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಿಂದ ಸುಮಾರು 20 ಬಸ್ ಸಂಚಾರ ಆರಂಭಗೊಂಡಿದೆ.
ಬಸ್ ಸಂಚಾರ ಪ್ರಾರಂಭ: ಕರ್ತವ್ಯಕ್ಕೆ ಹಾಜರಾಗದ 22 ಜನ ಸಿಬ್ಬಂದಿಯ ವರ್ಗಾವಣೆ - ಗದಗ 22 ಸಾರಿಗೆ ಇಲಾಖೆ ಸಿಬ್ಬಂದಿ ವರ್ಗಾವಣೆ
ಗದಗ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬಸ್ಗಳು ಸಂಚಾರ ಮಾಡುತ್ತಿವೆ. ಬಹುತೇಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭವಾಗಿಲ್ಲ.

ಗದಗ ಸಾರಿಗೆ ನೌಕರರ ಪ್ರತಿಭಟನೆ
ಗದಗನ ಎಲ್ಲ ತಾಲೂಕುಗಳಿಗೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬಸ್ಗಳು ಸಂಚಾರ ಮಾಡುತ್ತಿವೆ. ಬಹುತೇಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಗ್ರಾಮೀಣ ಪ್ರದೇಶಗಳಿಗೆ ಬಸ್ಗಳು ಸಂಚಾರ ಆರಂಭವಾಗಿಲ್ಲ.
ಕರ್ತವ್ಯಕ್ಕೆ ಹಾಜರಾಗದ ನೌಕರರ ಮೇಲೆ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲೆಯ ಸುಮಾರು 22 ಸಿಬ್ಬಂದಿಯನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ವರ್ಗಾವಣೆ ಆದೇಶ ಪತ್ರಗಳನ್ನ ಮುಷ್ಕರ ನಿರತ ಸಿಬ್ಬಂದಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಒತ್ತಡ ಹೇರಿ ನಮ್ಮ ಮುಷ್ಕರ ಹತ್ತಿಕ್ಕುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಸಿಬ್ಬಂದಿ ಆರೋಪ ಮಾಡಿದ್ದಾರೆ.