ಗದಗ:ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತಾಲೂಕಿನ ಹರ್ತಿ ಗ್ರಾಮದ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ, ಜಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ.
ವಿಜ್ಞಾನ ವಿಭಾಗದಲ್ಲಿ ಓದಿದ ವಿದ್ಯಾರ್ಥಿನಿಯು ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಫೇಲ್ ಆಗಿದ್ದಳು. ಫಲಿತಾಂಶದ ಬಳಿಕ ತೀವ್ರ ನೊಂದಿದ್ದು, ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.