ಕರ್ನಾಟಕ

karnataka

ETV Bharat / state

ಗದಗ ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂ. : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ರೈತ ಯಶಸ್ವಿನಿ ಯೋಜನೆ

ಗದಗ ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರವು 600 ಕೋಟಿ ರೂ ಅನುದಾನ ನೀಡಲಿದೆ. ಜೊತೆಗೆ ಶಿರಹಟ್ಟಿಗೆ ಸಂಪರ್ಕ ಕಲ್ಪಿಸುವ ಬಗ್ಗೆ ಪ್ರಯತ್ನಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

600-crore-for-the-gadag-yalavigi-railway-project-from-govt
ಗದಗ ಯಲವಿಗಿ ರೈಲ್ವೇ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Nov 8, 2022, 6:15 PM IST

ಗದಗ :ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರವು 600 ಕೋಟಿ ರೂ. ನೀಡುತ್ತದೆ. ಈ ರೈಲು ಶಿರಹಟ್ಟಿಯ ಮೂಲಕ ಸಾಗುವ ಬಗ್ಗೆ ಪೂರಕ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿರಹಟ್ಟಿಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ಶಿರಹಟ್ಟಿ ಮುಂಡರಗಿ ಕ್ಷೇತ್ರ ಪ್ರವಾಸೋದ್ಯಮ ಗಮ್ಯ : ಜಿಲ್ಲೆಯಲ್ಲಿ ಜಾಲವಾಡಗಿ ನೀರಾವರಿ ಯೋಜನೆಗೆ ಚಾಲನೆ ಹಾಗೂ ತಮಗೊಂಡ ಯೋಜನೆಗಳಿಗೆ ಶೀಘ್ರದಲ್ಲಿ ಮಂಜೂರಾತಿ ನೀಡಲಾಗುವುದು. ಶಿರಹಟ್ಟಿ ಮುಂಡರಗಿ ಕ್ಷೇತ್ರವನ್ನು ಪ್ರವಾಸೋದ್ಯಮದ ಗಮ್ಯವಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಲಂಬಾಣಿ ತಾಂಡಾಗಳ ಮನೆಗಳಿಗೆ ಹಕ್ಕುಪತ್ರ: ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಒಂದು ತಿಂಗಳಲ್ಲಿ ಮಾಡಲಾಗುವುದು. ತಾಂಡಾದ ಪ್ರತಿಯೊಂದು ಮನೆಗೂ ಹಕ್ಕುಪತ್ರಗಳನ್ನು ಒಂದು ತಿಂಗಳಲ್ಲಿ ತಲುಪಿಸಲಾಗುವುದು. ಮತ್ತು ಅವರ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಕನಕದಾಸರ ಸಭಾ ಭವನಕ್ಕೆ 1 ಕೋಟಿ ರೂ ಬಿಡುಗಡೆ: ಶಿರಹಟ್ಟಿಯಲ್ಲಿ ಕನಕದಾಸರ ಸಭಾ ಭವನ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇದಕ್ಕಾಗಿ 1 ಕೋಟಿ ರೂಪಾಯಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಗದಗ ಜಿಲ್ಲೆಯ 1.20 ಲಕ್ಷ ರೈತರಿಗೆ ಮಳೆ ಹಾನಿಗೊಳಗಾದ ಬೆಳೆಗಳಿಗೆ 209 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಜಿಲ್ಲೆಗೆ 97 ಕೋಟಿ ರೂ. ಬೆಳೆ ವಿಮೆ ಬಂದಿದೆ. 9 ಕೋಟಿ ರೂ.ಗಳ ರೈತ ವಿದ್ಯಾನಿಧಿಯನ್ನು ಈ ಜಿಲ್ಲೆಯ ಮಕ್ಕಳಿಗೆ ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆಯ 159 ಕೋಟಿ ರೂ ಜಿಲ್ಲೆಗೆ ಬಂದಿದ್ದು, ರೈತಾಪಿ ವರ್ಗವನ್ನು ಬಲಿಷ್ಠಗೊಳಿಸಲು ಈ ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

ರೈತ ಯಶಸ್ವಿನಿ ಯೋಜನೆಗೆ 500 ಕೋಟಿ ರೂ ಅನುದಾನ : ನಮ್ಮ ನಾಯಕರಾದ ಯಡಿಯೂರಪ್ಪ ಅವರು ಸಂಧ್ಯಾ ಸುರಕ್ಷಾ, ಮಕ್ಕಳಿಗೆ ಸೈಕಲ್, ಭಾಗ್ಯಲಕ್ಷ್ಮೀ ಯೋಜನೆ, ರೈತರಿಗೆ 10 ಹೆಚ್ ಪಿ ಉಚಿತ ವಿದ್ಯುತ್, ಕಿಸಾನ್ ಸಮ್ಮಾನ್​ ಯೋಜನೆಗಳ ಮೂಲಕ ರಾಜ್ಯ ಸರ್ಕಾರದಿಂದ 4000 ರೂ. ಸೇರಿ, ಒಟ್ಟು 10,000 ರೂ. ನೀಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ತಂದಿದ್ದು, 10.16 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ದೊರೆತಿದೆ. ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಟ್ಯಾಕ್ಸಿ , ಆಟೋ ಚಾಲಕರ ಮಕ್ಕಳಿಗೂ ಈ ಯೋಜನೆ ವಿಸ್ತರಣೆ ಮಾಡಲಾಗಿದೆ. ರೈತ ಯಶಸ್ವಿನಿ ಯೋಜನೆ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗಿದೆ. ರೈತಶಕ್ತಿ, ಡೀಸೆಲ್ ಯೋಜನೆಯಿಂದ 28 ಲಕ್ಷ ರೈತರಿಗೆ ಅನುಕೂಲವಾಗಿದೆ ಎಂದರು.

5 ಲಕ್ಷ ಮಹಿಳೆಯರು ಹಾಗೂ 5 ಲಕ್ಷ ಯುವಕರಿಗೆ ಉದ್ಯೋಗ : ಹಿಂದುಳಿದ ವರ್ಗದವರ ವಿದ್ಯಾರ್ಥಿಗಳ ವಸತಿ ನಿಲಯ ವೇತನ, ವಿದ್ಯಾರ್ಥಿ ವೇತನ ಹೆಚ್ಚಿಸಲಾಗಿದೆ. 50 ಕನಕದಾಸ ಹಾಸ್ಟೆಲ್ ಗಳು, 100 ಅಂಬೇಡ್ಕರ್ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಿಸುವ ದಿಟ್ಟ ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಈ ಸಮಾಜವನ್ನು ಎತ್ತಿ ಹಿಡಿಯುವ ಕೆಲಸವನ್ನು ಬದ್ಧತೆಯಿಂದ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಪ್ರತಿ ಗ್ರಾಮದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ, ತಲಾ 2 ಸಂಘಕ್ಕೆ 5 ಲಕ್ಷ ರೂ ನೀಡಲಾಗುವುದು. ಅದೇ ರೀತಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದ ತಲಾ 2 ಸಂಘಕ್ಕೆ 5 ಲಕ್ಷ ರೂ. ನೀಡಲಾಗುವುದು. ಇದರಿಂದ 5 ಲಕ್ಷ ಮಹಿಳೆಯರಿಗೆ ಹಾಗೂ 5 ಲಕ್ಷ ಯುವಕರಿಗೆ ಉದ್ಯೋಗ ಸಿಕ್ಕಂತಾಗುತ್ತದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳಲ್ಲಿ ಜನರನ್ನು ಪಾಲುದಾರರನ್ನಾಗಿ ಮಾಡುವ ಗುರಿ ನಮ್ಮದಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ರಾಮುಲು, ಸಂಸದ ಶಿವಕುಮಾರ ಉದಾಸಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ

ABOUT THE AUTHOR

...view details