ಗದಗ: ಜಿಲ್ಲೆಯಲ್ಲಿ ಇಂದು ಒಂದೇ ದಿನ 61 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 943ಕ್ಕೆ ಏರಿಕೆಯಾಗಿದೆ ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.
61 ಮಂದಿಯಲ್ಲಿ ಕೊರೊನಾ ಸೋಂಕು ದೃಢ... ಗದಗದಲ್ಲಿ ಓರ್ವ ಬಲಿ - Gadag latest news
ಜಿಲ್ಲೆಯಲ್ಲಿಂದು ಓರ್ವ ವ್ಯಕ್ತಿ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದು, 61 ಜನರಿಗೆ ಸೋಂಕು ದೃಢಪಟ್ಟಿದೆ. ಸದ್ಯ 595 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
Gadag corona case
ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಡುವ ಮೂಲಕ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇಂದು 28 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಈವರೆಗೆ 328 ಮಂದಿ ಗುಣಮುಖರಾಗಿದ್ದಾರೆ. ಸದ್ಯ 595 ಸಕ್ರಿಯ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.