ಕರ್ನಾಟಕ

karnataka

ಗದಗದಲ್ಲಿ ಇಂದು 61 ಹೊಸ ಕೇಸ್, ಇಬ್ಬರ ಸಾವು!

By

Published : Jul 26, 2020, 7:59 PM IST

ಗದಗ ಜಿಲ್ಲೆಯಲ್ಲಿ ಇಂದು 61 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ ಇಂದು ಇಬ್ಬರು ಮೃತಪಟ್ಟಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 22 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

61 new positive cases reported in Gadag
ಗದಗದಲ್ಲಿ ಇಂದು 61 ಹೊಸ ಕೇಸ್

ಗದಗ : ಜಿಲ್ಲೆಯಲ್ಲಿ ಇಂದು ಮತ್ತೆ 61 ಕೊರೊನಾ ಕೇಸ್ ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1,004ಕ್ಕೆ ಏರಿಕೆಯಾಗಿದೆ.

ಇಂದು ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಮೂಲಕ ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.

ಗದಗ ಜಿಲ್ಲಾಧಿಕಾರಿ ಸುಂದರೇಶಬಾಬು

ಇಂದು 26 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ 354 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 628 ಸಕ್ರಿಯ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ABOUT THE AUTHOR

...view details