ಗದಗ:ಜಿಲ್ಲೆಯಲ್ಲಿ ಇಂದು 78 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1842ಕ್ಕೆ ಏರಿಕೆಯಾಗಿದೆ. ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿರೋದಾಗಿ ವರದಿಯಾಗಿದೆ.
ಗದಗನಲ್ಲಿ ಇಂದು 78 ಕೊರೊನಾ ಕೇಸ್ ಪತ್ತೆ: 108 ಜನ ಗುಣಮುಖ - Gadag corona news
ಗದಗದಲ್ಲಿ ಇಂದು 78 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1842ಕ್ಕೆ ಏರಿಕೆಯಾಗಿದೆ. ಒಂದೇ ದಿನ 108 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜೊತೆಗೆ ಈವರೆಗೆ 741 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲಾಡಳಿತ ಭವನ
ಈ ಮೂಲಕ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 108 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜೊತೆಗೆ ಈವರೆಗೆ 741 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1060ಕ್ಕೆ ಏರಿಕೆಯಾಗಿದ್ದು, ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.