ಗದಗ:ಜಿಲ್ಲೆಯಲ್ಲಿಂದು 82 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು 10 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗದಗನಲ್ಲಿಂದು 82 ಹೊಸ ಕೋವಿಡ್ ಪ್ರಕರಣ: 555ಕ್ಕೇರಿದ ಸೋಂಕಿತರ ಸಂಖ್ಯೆ - ಕೊರೊನಾ ವೈರಸ್
ಮುದ್ರಣ ಕಾಶಿ ಗದಗದಲ್ಲೂ ಕೊರೊನಾ ಅಬ್ಬರ ಜೋರಾಗಿದ್ದು, ಒಂದೇ ದಿನ 82 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
82 New COVID Case in Gadag
ಸೋಂಕಿತರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ. ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ನಿನ್ನೆಯಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಜುಲೈ 27ರವರೆಗೂ ಇದು ಜಾರಿಯಲ್ಲಿರುತ್ತದೆ.
ಜಿಲ್ಲಾಡಳಿತದ ಆದೇಶ ಹೊರಡಿಸಿರುವ ಪ್ರಕಾರ, ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಬಳಕೆ ವಸ್ತುಗಳಾದ ದಿನಸಿ, ತರಕಾರಿ ಸೇರಿದಂತೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.