ಗದಗ:ಜಿಲ್ಲೆಯಲ್ಲಿ 9 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಜಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಗದಗದಲ್ಲಿ 9 ಮಂದಿ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದ 9 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ ಬಂದು ಮೇ 23ರಂದು ಜಿಮ್ಸ್ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದರು. ಇದೀಗ 9 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಬಿಡುಗಡೆಯಾಗಿದ್ದಾರೆ. ಇವರಿಗೆ ಜೂ. 4ರಂದು ನಡೆದ ಕೋವಿಡ್ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ಬಂದಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಜಿಮ್ಸ್ ನಿರ್ದೇಶಕ ಪಿ.ಎಸ್.ಭೂಸರೆಡ್ಡಿ ತಿಳಿಸಿದ್ದಾರೆ.
ಇವರನ್ನು ಮುಂದಿನ 14 ದಿನಗಳ ಕಾಲ ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಗದಗ ಜಿಲ್ಲೆಯಲ್ಲಿ 37 ಸೋಂಕಿತರ ಪೈಕಿ ಇಬ್ಬರು ಸಾವನ್ನಪ್ಪಿದ್ದು, 26 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ 16 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.