ಗದಗ:ಜಿಲ್ಲೆಯಲ್ಲಿ ಇಂದು ಮತ್ತೆ 99 ಕೊರೊನಾ ಕೇಸ್ ಪತ್ತೆಯಾಗುವುದರ ಮೂಲಕ ಸೋಂಕಿತರ ಸಂಖ್ಯೆ 1,480ಕ್ಕೆ ಏರಿಕೆಯಾಗಿದ್ದು, ಇಂದು 2 ವ್ಯಕ್ತಿಗಳು ಕೊರೊನಾ ವೈರಸ್ಗೆ ಬಲಿಯಾಗಿರುವುದಾಗಿ ವರದಿಯಾಗಿದೆ.
ಗದಗದಲ್ಲಿ ಇಂದು 99 ಕೊರೊನಾ ಕೇಸ್ ಪತ್ತೆ: ಎರಡು ಬಲಿ - ಗದಗ ಕೊರೊನಾ
ಗದಗ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು 99 ಜನರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕೊರೊನಾ ರೋಗಕ್ಕೆ ತುತ್ತಾದ ಇಬ್ಬರು ಇಂದು ಮೃತಪಟ್ಟಿದ್ದಾರೆ.
ಗದಗ
ಜಿಲ್ಲೆಯಲ್ಲಿ ಇಂದು 43 ಜನರು ಕೊರೊನಾದಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಈವರೆಗೆ 533 ಜನ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 913ಕ್ಕೆ ಏರಿಕೆಯಾಗಿದ್ದು, ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.