ಗದಗ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮದಲ್ಲಿ ನಡೆದಿದೆ.
ಸಾಲಭಾದೆ ತಾಳಲಾರದೆ ನೇಣಿಗೆ ಶರಣಾದ ರೈತ - ಫಕ್ಕೀರಪ್ಪ ಮಜ್ಜಿಗುಡ್ಡ ಸಾವನ್ನಪ್ಪಿದ ರೈತ
ಗದಗ ಜಿಲ್ಲೆಯ ರೈತನೋರ್ವ ಬೆಳೆ ನಷ್ಟ ಹಾಗೂ ಸಾಲ ಬಾಧೆಯಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನೇಣಿಗೆ ಶರಣಾದ ರೈತ
ಫಕೀರಪ್ಪ ಮಜ್ಜಿಗುಡ್ಡ(56) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಖಾಸಗಿ ಫೈನಾನ್ಸ್ ಮೂಲಕ ಟ್ರ್ಯಾಕ್ಟರ್ ಖರೀದಿಸಲೆಂದು ಸಾಲ ಪಡೆದಿದ್ದು, ಬೆಳೆದ ಬೆಳೆ ಕೈಗೆ ಸಿಗದೆ ನಷ್ಟ ಅನುಭವಿಸಿದ್ದರಿಂದ ಟ್ರ್ಯಾಕ್ಟರ್ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಫೈನಾನ್ಸ್ ಸಿಬ್ಬಂದಿ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಿದ್ದರು. ಇದರಿಂದ ನೊಂದ ರೈತ ಫಕೀರಪ್ಪ ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.