ಗದಗ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆ ಮನೆಗಳಿಗೆ ಹಾನಿಯಾಗಿವೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ 15ನೇ ವಾರ್ಡ್ನ ಹಿರೇಮಠ ಓಣಿಯ ನಿವಾಸಿ ಶರಣಪ್ಪ ಮಡಿವಾಳರ ಎಂಬುವರ ಮನೆಯ ಗೋಡೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಮನೆಮಂದಿ ಅದೃಷ್ಟವಶಾತ್ ಪಾರಾಗಿರುವ ಘಟನೆ ನಡೆದಿದೆ.
ರಾತ್ರಿ ಊಟ ಮಾಡಿ ಕುಳಿತಿರುವಾಗ ಇದ್ದಕ್ಕಿದ್ದಂತೆ ಮನೆಯ ಗೋಡೆ ಕುಸಿತ ಕಂಡಿದೆ. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ನಿಂಗಪ್ಪ ಮಡಿವಾಳರ ಮೇಲೆ ಮನೆಗೋಡೆ ಕುಸಿದು ಬಿದ್ದಿದ್ದು, ಕಾಲು ಹಾಗೂ ತೊಡೆಯ ಭಾಗಕ್ಕೆ ಪೆಟ್ಟಾಗಿದೆ. ಜೊತೆಗೆ ತಾಯಿ ಶಾಂತಮ್ಮ ಮಡಿವಾಳರ ಮಣ್ಣಿನಲ್ಲಿ ಸಿಲುಕಿದ್ದು, ತಕ್ಷಣ ಸ್ಥಳೀಯರು ಅವರನ್ನು ರಕ್ಷಣೆ ಮಾಡಿ, ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ.