ಗದಗ: ವ್ಯಕ್ತಿಯೊಬ್ಬನನ್ನು ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ - ಸೂರಣಗಿ ವ್ಯಕ್ತಿಯ ಹತ್ಯೆ
ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬನನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸುವಂತೆ ಮೃತನ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ವ್ಯಕ್ತಿಯ ಬರ್ಬರ ಹತ್ಯೆ
ಮೃತನನ್ನು ಮರಿಯಪ್ಪ ತಳಗೇರಿ (30) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕೊಲೆಗೈದು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಯತೀಶ್ ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಆರೋಪಿಗಳು ಯಾರಾಗಿದ್ದರೂ ಸಹ ಶೀಘ್ರವಾಗಿ ಬಂಧಿಸುವಂತೆ ಮೃತನ ಸಂಬಂಧಿಕರು ಒತ್ತಾಯಿಸಿದ್ದಾರೆ. ಪ್ರಕರಣ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.