ಗದಗ : ತಾಯಿ ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಲು ಬಂದಿದ್ದಾಳೆ. ಈ ವೇಳೆ, ಇಬ್ಬರು ಮಕ್ಕಳು ಅಮ್ಮನಿಂದ ತಪ್ಪಿಸಿಕೊಂಡಿದ್ದು, 4 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ರೋಣ ತಾಲೂಕಿನ ಹೋಳೆ ಆಲೂರು ಗ್ರಾಮದ ಮಲಪ್ರಭಾ ನದಿಯಲ್ಲಿ ಈ ಘಟನೆ ಸಂಭವಿಸಿದೆ. ಉಮಾದೇವಿ (45) ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ನದಿಗೆ ಹಾರಿದ್ದಾರೆ. ಮೂರು ತಿಂಗಳ ಹಿಂದೆ ಈಕೆಯ ಪತಿ ಸಂಗಮೇಶ ಚಲ್ಲಿಕೇರಿ ಕೋವಿಡ್ನಿಂದ ಸಾವನ್ನಪ್ಪಿದ್ದರು. ಪತಿ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.