ಗದಗ:ಜಿಮ್ಸ್ ಕಾಲೇಜಿನಲ್ಲಿ ಅಕೌಂಟ್ ಕೆಲಸ ಮಾಡುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿದ ಘಟನೆ ನಡೆದಿದೆ. ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಖಾಸಗಿ ಕಾಲೇಜಿನ ಸಿಬ್ಬಂದಿ ಆತ್ಮಹತ್ಯೆಗೆ ಶರಣು - gadag crime news
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿನ ತಮ್ಮ ಮನೆಯಲ್ಲಿ ನಸ್ರೀನ್ ಬಾನು(26) ನೇಣಿಗೆ ಶರಣಾಗಿದ್ದಾಳೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಖಾಸಗಿ ಕಾಲೇಜಿನ ಸಿಬ್ಬಂದಿ ಆತ್ಮಹತ್ಯೆ
ನಸ್ರೀನ್ ಬಾನು(26) ನೇಣಿಗೆ ಶರಣಾಗಿರುವ ಯುವತಿ. ಗದಗದ ಜಿಮ್ಸ್ ಕಾಲೇಜಿನಲ್ಲಿ ಕಳೆದ ಐದಾರು ವರ್ಷಗಳಿಂದ ನಸ್ರೀನ್ ಬಾನು ಅಕೌಂಟ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ಶನಿವಾರ ಕೆಲಸಕ್ಕೆ ಹಾಜರಾಗಿ ಮರಳಿದ್ದಳು.
ಆದರೆ ಇಂದು ನೇಣುಬಿಗಿದ ಸ್ಥಿತಿಯಲ್ಲಿ ನಸ್ರೀನ್ ಬಾನು ದೇಹ ಪತ್ತೆಯಾಗಿದೆ. ಈ ಸಂಬಂಧ ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.