ಗದಗ: ಜನವರಿ 20ರಂದು ದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುವ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗ ಅಭಯ ರಂಗ್ರೇಜಿ ಎಂಬ ವಿದ್ಯಾರ್ಥಿಆಯ್ಕೆಯಾಗಿದ್ದಾನೆ.
ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಗದಗ ವಿದ್ಯಾರ್ಥಿ ಆಯ್ಕೆ.. - ಗದಗ ಸುದ್ದಿ
ಜನವರಿ 20ರಂದು ದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸುವ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗದ ವಿದ್ಯಾರ್ಥಿ ಅಭಯ ರಂಗ್ರೇಜಿ ಆಯ್ಕೆಯಾಗಿದ್ದಾನೆ.
ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಗದಗದ ಅಭಯ ರಂಗ್ರೇಜಿ ಆಯ್ಕೆ
ಜಿಲ್ಲೆಯ ರೋಣ ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಅಭಯ ರಂಗ್ರೇಜಿ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿದ ಬಳಿಕ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಾತಾವರಣ ನಿರ್ಮಿಸಲು ಪ್ರಧಾನಿ ಬಳಿ ಡಿಜಿಟಲ್ ಲೈಬ್ರರಿ ತೆರೆಯಬೇಕು ಎಂದು ಮನವಿ ಮಾಡಕೊಳ್ಳುವುದಾಗಿ ಅಭಯ ರಂಗ್ರೇಜಿ ತಿಳಿಸಿದ್ದಾನೆ.