ಗದಗ: ನಗರದಲ್ಲಿ ಎಸಿಬಿ ಅಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಗದಗದಲ್ಲಿ ಎಸಿಬಿ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಬಲೆಗೆ - arrested corrupt officials
ಗದಗದಲ್ಲಿ ಸಬ್ಸಿಡಿ ಮಂಜೂರು ಮಾಡಲು ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಕುಕನೂರ ಮತ್ತು ಕಂಪ್ಯೂಟರ್ ಆಪರೇಟರ್ ಅಕ್ಬರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಫಾರೂಕ್ ಅಹ್ಮದ್ ಬದರಕುಂದಿ ಎಂಬುವರಿಗೆ ನಿಗಮದ ವತಿಯಿಂದ 3 ಲಕ್ಷ ರೂ. ಸಬ್ಸಿಡಿ ಮಂಜೂರಾಗಿತ್ತು. ಸಬ್ಸಿಡಿ ಮಂಜೂರು ಮಾಡಲು ಫಾರೂಕ್ ಅವರಿಂದ 40 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರಂತೆ.
ಲಂಚ ಸ್ವೀಕಾರ ಮಾಡುವ ವೇಳೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ನಗರದ ಎಸಿಬಿ ಡಿಎಸ್ಪಿ ವಾಸುದೇವ ರಾಮ್ ಎನ್. ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.