ಕರ್ನಾಟಕ

karnataka

ETV Bharat / state

ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರ ದುರ್ಮರಣ - ಗದಗ ತಾಲೂಕಿನ ಹರ್ಲಾಪೂರ ಕ್ರಾಸ್ ಬಳಿ ಕಾರು ಬೈಕ್​ ನಡುವೆ ಅಪಘಾತ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಗದಗ ತಾಲೂಕಿನ ಹರ್ಲಾಪೂರ ಕ್ರಾಸ್ ಬಳಿ ನಡೆದಿದೆ..

Accident between Car-bike
ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ

By

Published : Jan 21, 2022, 7:53 PM IST

ಗದಗ :ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೇ, ಹಿಂಬದಿ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ಈ ಘಟನೆ ಗದಗ ತಾಲೂಕಿನ ಹರ್ಲಾಪೂರ ಕ್ರಾಸ್ ಬಳಿ ನಡೆದಿದೆ. 50 ವರ್ಷದ ಗುತ್ತಿಗೆದಾರ ಯಲ್ಲಪ್ಪ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೆಸಿಬಿ ಚಾಲಕ 35 ವರ್ಷದ ಲೋಕೇಶ್ ಗುಡಗೇರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಹ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ : ಆಸ್ಪತ್ರೆಗೆ ಕರೆದೊಯ್ಯುವಾಗ ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಮೃತ ಯಲ್ಲಪ್ಲಗೌಡ ಹಾಗೂ ಲೋಕೇಶ್ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದವರು ಎನ್ನಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details