ಗದಗ:ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 5ಕ್ಕೇರಿದೆ. ಈ ಕುರಿತು ಸರ್ಕಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಸೋಂಕಿತ ವ್ಯಕ್ತಿಯು ಗದಗದ ಗಂಜಿ ಬಸವೇಶ್ವರ ಓಣಿಯ ನಿವಾಸಿ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಈಟಿವಿ ಭಾರತ್ಗೆ ಮಾಹಿತಿ ನೀಡಿದರು. ಸೋಂಕಿತ ವ್ಯಕ್ತಿಗೆ (ರೋಗಿ-514) 75 ವರ್ಷ ವಯಸ್ಸಾಗಿದೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಇವರು, ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿದ್ದಾರೆ.