ಗದಗ: 2021 ಪಂಚಮಸಾಲಿ ಸಂಘಟನೆಯ ನಿರ್ಣಾಯಕ ವರ್ಷ. 2A ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
2A ಮೀಸಲಾತಿಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ - panchamasali peetah news
2A ಮೀಸಲಾತಿಗೆ ಆಗ್ರಹಿಸಿ ಜನವರಿ 14ರಂದು ಬೃಹತ್ ಪಾದಯಾತ್ರೆ ಕೈಗೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಸಮಾಜ ಸಂಘಟನೆ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಮೀಸಲಾತಿಗಾಗಿ ಪಂಚಮಸಾಲಿ ನಡಿಗೆ ವಿಧಾನಸೌಧದೆಡೆಗೆ. ಒಬ್ಬ ಪಂಚಮಸಾಲಿ, ಪಂಚಲಕ್ಷ ಪಂಚಮಸಾಲಿಗೆ ಸಮ. ನಮ್ಮ ಪಾಲಿನ ಹಕ್ಕು ನಮಗೆ ಬೇಕು ಎಂಬ ಧ್ಯೇಯವಾಕ್ಯದೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಜ.14 ಸಂಕ್ರಾಂತಿ ದಿನದಂದು ಬೃಹತ್ ಪಾದಯಾತ್ರೆ ಕೈಗೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಗುಡುಗಿದರು.
ಪಂಚಮಸಾಲಿ ಸಮುದಾಯಕ್ಕೆ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ನೀಡದ್ದಕ್ಕೆ ಸರ್ಕಾರದ ಮೇಲೆ ಅಸಮಾಧಾನವಿದೆ. ಅಸಮಾಧಾನ ಸರಿಯಾಗಬೇಕಾದರೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.