ಗದಗ :ರಾಕಿಂಗ್ ಸ್ಟಾರ್ ಯಶ್ಜನ್ಮದಿನಕ್ಕೆಶುಭ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಗದಗದ ತೇಜಾ ನಗರದ ಬಳಿ ಪೊಲೀಸ್ ವಾಹನಕ್ಕೆ ಯುವಕನೋರ್ವನ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಯುವಕ ತೀವ್ರವಾಗಿ ಗಾಯಗೊಂಡಿದ್ದು, ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗದಗ; ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ; ಯುವಕನಿಗೆ ಗಂಭೀರ ಗಾಯ - ಯಶ್ ಜನ್ಮದಿನ
ಪೊಲೀಸ್ ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿರುವ ಘಟನೆ ಗದಗದ ತೇಜಾ ನಗರ ಬಳಿ ನಡೆದಿದೆ.
![ಗದಗ; ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ; ಯುವಕನಿಗೆ ಗಂಭೀರ ಗಾಯ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ](https://etvbharatimages.akamaized.net/etvbharat/prod-images/08-01-2024/1200-675-20462034-thumbnail-16x9-mh4556.jpg)
Published : Jan 8, 2024, 10:37 PM IST
|Updated : Jan 9, 2024, 10:10 AM IST
ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದ ಹಿನ್ನೆಲೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಸೋಮವಾರ ಸಂಜೆ ಭೇಟಿ ನೀಡಿದ್ದ ಯಶ್ ಅವರು ಮೃತ ಯುವಕರ ಪೋಷಕರಿಗೆ ಸಾಂತ್ವನ ಹೇಳಿದರು. ನಂತರ ಜಿಮ್ಸ್ (ಜಿಲ್ಲಾಸ್ಪತ್ರೆ)ಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿdರು. ಮತ್ತೊಂದೆಡೆ ತನ್ನ ನೆಚ್ಚಿನ ನಟನನ್ನು ನೋಡಲು ಯುವಕನೋರ್ವ ಬೈಕ್ನಲ್ಲಿ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.
ಇದನ್ನೂ ಓದಿ :ಬರ್ತ್ ಡೇ ಅಂದ್ರೆನೇ ಭಯ ಆಗ್ತಿದೆ, ಮೃತರ ಕುಟುಂಬಗಳಿಗೆ ಅಗತ್ಯ ಸಹಾಯ ಮಾಡುವೆ: ಯುವಕರ ಪೋಷಕರಿಗೆ ಯಶ್ ಸಾಂತ್ವನ