ಕರ್ನಾಟಕ

karnataka

ETV Bharat / state

ಗದಗ ಬಳಿ ಡಸ್ಟರ್ ಕಾರು ಪಲ್ಟಿ... ಬಿಜೆಪಿ ನಾಯಕನ ಪತ್ನಿ, ಪುತ್ರ ಸೇರಿ ಮೂವರ ಸಾವು - 3 family members killed in Gadag Road accident,

ಗದಗ ಬಳಿ ಡಸ್ಟರ್ ಕಾರು ಪಲ್ಟಿಯಾಗಿ ಬಿಜೆಪಿ ನಾಯಕನ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Gadag Road accident, 3 family members killed in Gadag Road accident, BJP's 3 family members killed in Gadag Road accident, ಗದಗ ರಸ್ತೆ ಅಪಘಾತ, ಗದಗ ರಸ್ತೆ ಅಪಘಾತದಲ್ಲಿ ಮೂವರು ಸಾವು, ಗದಗ ರಸ್ತೆ ಅಪಘಾತದಲ್ಲಿ ಬಿಜೆಪಿ ಕುಟುಂಬದ ಮೂವರು ಸಾವು,
ಗದಗ ಬಳಿ ಡಸ್ಟರ್ ಕಾರು ಪಲ್ಟಿ

By

Published : Mar 9, 2020, 7:35 PM IST

Updated : Mar 9, 2020, 7:51 PM IST

ಗದಗ: ಡಸ್ಟರ್ ಕಾರು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿರೋ ಬೂದಿ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಕೊಪ್ಪಳ ನಗರ ಘಟಕದ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ವಿಶ್ವ ಹಿಂದು ಪರಿಷತ್‌ನ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶಿವಕುಮಾರ ಹಕ್ಕಾಪಕ್ಕಿ ಅವರ ಅತ್ತೆ, ಹೆಂಡತಿ ಮತ್ತು ಮಗು ಅಪಘಾತದಲ್ಲಿ ಮೃತಪಟ್ಟಿದೆ. ಗಂಗಾವತಿಯ ಪ್ರಮೀಳಾ ಮಸ್ಕಿ (70), ಪೂರ್ಣಿಮಾ ಹಕ್ಕಾಪಕ್ಕಿ (45) ಮತ್ತು 17 ತಿಂಗಳ ಗಂಡು ಮಗು ಆರ್ಯ ಮೃತಪಟ್ಟವರೆಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬಿಜೆಪಿ ನಾಯಕನ ಪತ್ನಿ, ಪುತ್ರ ಸೇರಿ ಮೂವರ ಸಾವು

ಇನ್ನು ಅವಳಿ ಜವಳಿ ಮಕ್ಕಳಲ್ಲಿ ಗಂಡು ಮಗು ಆರ್ಯ ಸಾವನಪ್ಪಿದ್ದು, ಹೆಣ್ಣು ಮಗು ಬದುಕುಳಿದಿದೆ. ಮದುವೆಯಾಗಿ ಬಹಳ ವರ್ಷಗಳಾದರೂ ಹಕ್ಕಾಪಕ್ಕಿ ದಂಪತಿಗೆ ಮಕ್ಕಳಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನವಲಗುಂದದ ರಾಮಲಿಂಗ ಹೋಳಿ ಕಾಮಣ್ಣನಿಗೆ ಹರಕೆ ಕಟ್ಟಿಕೊಂಡಿದ್ದರು. ಮಕ್ಕಳಾದ ಸಂತಸದಲ್ಲಿ ಮತ್ತು ಹೋಳಿ ಹುಣ್ಣಿಮೆ ಹಿನ್ನೆಲೆ ಇಂದು ಹರಕೆ ತೀರಿಸಿ ಕೊಪ್ಪಳಕ್ಕೆ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಗಾಯಗೊಂಡಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವಕುಮಾರ ಹಕ್ಕಾಪಕ್ಕಿ ಮತ್ತು ಇನ್ನೊಂದು ಅವಳಿ ಮಗು ಅಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ ಹಕ್ಕಾಪಕ್ಕಿ ಅವರ ಮಾವನವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

Last Updated : Mar 9, 2020, 7:51 PM IST

ABOUT THE AUTHOR

...view details