ಗದಗ: ಮಲಪ್ರಭಾ ಹಾಗೂ ಬೆಣ್ಣೆಹಳ್ಳದ ಪ್ರವಾಹ ವಿದ್ಯಾರ್ಥಿಗಳ ಬದುಕಿನ ಜೊತೆಗೂ ಚೆಲ್ಲಾಟವಾಡಿದೆ.
ಪ್ರವಾಹದಲ್ಲಿ ಕೊಚ್ಚಿಹೋದ ಪುಸ್ತಕಗಳು... ಕಂಗಾಲಾದ ವಿದ್ಯಾರ್ಥಿಗಳು - ನರಗುಂದ
ಕಳೆದ 15 ದಿನಗಳ ಹಿಂದೆ ಜಿಲ್ಲೆಯ ರೋಣ ಹಾಗೂ ನರಗುಂದ ತಾಲೂಕುಗಳ ಹಲವಾರು ಹಳ್ಳಿಗಳಿಗೆ ನುಗ್ಗಿದ ಪ್ರವಾಹದ ನೀರು ಮನೆಯೊಳಗಿದ್ದ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳನ್ನೂ ಸ್ವಾಹಃ ಮಾಡಿದೆ.
ವಿದ್ಯಾರ್ಥಿಗಳ ಬದುಕು ಅತಂತ್ರ
ಹೌದು, ಕಳೆದ 15 ದಿನಗಳ ಹಿಂದೆ ಜಿಲ್ಲೆಯ ರೋಣ ಹಾಗೂ ನರಗುಂದ ತಾಲೂಕುಗಳ ಹಲವಾರು ಹಳ್ಳಿಗಳಿಗೆ ನುಗ್ಗಿದ ಪ್ರವಾಹದ ನೀರು ಮನೆಯೊಳಗಿದ್ದ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳನ್ನೂ ಸ್ವಾಹಃ ಮಾಡಿದೆ.
ಸದ್ಯ ಪ್ರವಾಹ ತಗ್ಗಿದ್ದು, ಅಲ್ಲಲ್ಲಿ ರಸ್ತೆಗಳಲ್ಲಿ ಮಕ್ಕಳ ಪುಸ್ತಕ, ಬ್ಯಾಗ್ಗಳು ಕಾಣ ಸಿಗುತ್ತಿವೆ. ಪುಸ್ತಕ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಕಳೆದುಕೊಂಡ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಕೂಡಲೇ ಶಿಕ್ಷಣ ಇಲಾಖೆ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.