ಕರ್ನಾಟಕ

karnataka

ETV Bharat / state

ಸೈಕಲ್​ನಲ್ಲಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕ ಬಸ್​​ಗೆ ಸಿಲುಕಿ ಸಾವು - gadag

ಶಾಲೆಯಿಂದ ವಿದ್ಯಾರ್ಥಿ ಸೈಕಲ್ ಮೇಲೆ ಮನೆಗೆ ತೆರಳುತ್ತಿದ್ದ ವೇಳೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ

By

Published : Aug 1, 2019, 4:40 AM IST

ಗದಗ:ಶಾಲೆಯಿಂದ ಸೈಕಲ್​ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಸರ್ಕಾರಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬಳಿ ಸಂಭವಿಸಿದೆ.

ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ

ದೊಡ್ಡಬೀರಪ್ಪ ಒಡ್ಡಟ್ಟಿ (14) ಮೃತ ವಿದ್ಯಾರ್ಥಿ. ಶಾಲೆಯಿಂದ ವಿದ್ಯಾರ್ಥಿ ಸೈಕಲ್ ಮೇಲೆ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮುಂಡರಗಿಯಿಂದ ಹಮ್ಮಿಗಿ ಗ್ರಾಮಕ್ಕೆ ಕೆಎಸ್​ಆರ್​ಟಿಸಿ ಬಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಲ್ಲೇ ಬಸ್​ ಬಿಟ್ಟು ಪರಾರಿಯಾಗಿದ್ದಾನೆ.

ಬಾಲಕನಿಗೆ ಡಿಕ್ಕಿ ಹೊಡೆದ ಬಸ್​

ಸ್ಥಳಕ್ಕೆ ಮುಂಡರಗಿ ಸಿಪಿಐ ಶ್ರೀನಿವಾಸ ಮೇಟಿ ಭೇಟಿ ನೀಡಿ ಪರಿಶೀಲಿಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details