ಗದಗ:ಕ್ಯಾಂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಸ್ಥಳದಲ್ಲೇ ಬೈಕ್ನಲ್ಲಿದ್ದ ರೈತ ಸಾವನ್ನಪ್ಪಿದ ಘಟನೆ ಗದಗನಲ್ಲಿ ನಡದಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತನನ್ನು 55 ವರ್ಷದ ಫಕೀರಪ್ಪ ದೇವಪ್ಪ ಮುತ್ತಾಳ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಕೊಪ್ಪಳ ಜಿಲ್ಲೆ ಕೂಕನೂರು ತಾಲೂಕಿನ ಕೋಮಲಾಪುರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಫೋರ್ಲೈನ್ ಕೆಲಸ ಮಂದಗತಿಯಲ್ಲಿ ನಡೆಯುತ್ತಿದ್ದು, ರಸ್ತೆ ತಗ್ಗು ದಿನ್ನೆಗಳಿಂದ ಕೂಡಿರುವುದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪಘಾತದ ನಂತರ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.