ಕರ್ನಾಟಕ

karnataka

ETV Bharat / state

ಕಾರು-ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ - ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಕಾರು- ಲಾರಿ ಮುಖಾಮುಖಿ ಡಿಕ್ಕಿ
Car collided with Lorry

By

Published : Feb 17, 2021, 6:54 PM IST

ಗದಗ: ಲಾರಿ-ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆ

ಮೃತರನ್ನು ಪ್ರೇಮ ಈಶ್ವರಗೌಡ ಪಾಟೀಲ್(55) ಹಾಗೂ ಕಾರು ಚಾಲಕ ಅನ್ವರ್ ಎಂದು ಗುರುತಿಸಲಾಗಿದೆ. ಈಶ್ವರಗೌಡ ರುದ್ರಗೌಡ ಪಾಟೀಲ್, ಶಿವಾಬಾಯಿ ಮೇಲಗಿರಿಗೌಡ ಪಾಟೀಲ್, ಮಹಾರಾಜ ಮೇಲಗಿರಿಗೌಡ ಪಾಟೀಲ್ ಎಂಬುವರಿಗೆ ಗಾಯಾಳುಗಳಾಗಿದ್ದು, ಇವರಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್​ ಸೇರಿದ ಟಾಟಾ ಆಲ್ಟ್ರೋಜ್​​!

ಇವರು ಮೂಲತಃ ರೋಣ ತಾಲೂಕಿನ ಮಾಳವಾಡ ಗ್ರಾಮದವರಾಗಿದ್ದು, ಧಾರವಾಡದಲ್ಲಿ ನೆಲೆಸಿದ್ದಾರೆ. ಇಂದು ಸ್ವಗ್ರಾಮ ಮಾಳವಾಡದಲ್ಲಿ ತಮ್ಮ ಜಮೀನಿಗೆ ಭೇಟಿ ನೀಡಿ ವಾಪಸ್ ತೆರಳುತ್ತಿದ್ದ ವೇಳೆ ಹುಲಕೋಟಿ ಗ್ರಾಮದ ಬಳಿಯಿರುವ ರೂರಲ್ ಇಂಜಿನಿಯರಿಂಗ್ ಕಾಲೇಜು ಸಮೀಪ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details