ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಘಟನೆ ಮುಂಡರಗಿ ತಾಲೂಕಿನ ಕದಾಂಪುರ ಗ್ರಾಮದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ 100 ಅಡಿ ದೂರಕ್ಕೆ ಉರುಳಿ ಬಿದ್ದ ಕಾರು - ಕಾರು ಪಲ್ಟಿ
ಸೇತುವೆಗೆ ಡಿಕ್ಕಿ ಹೊಡೆದ ಕಾರು, ಸೇತುವೆ ಮೇಲೆ ಸುಮಾರು 50 ಅಡಿ ಮುಂದೆ ಹೋಗಿ ರಸ್ತೆ ಬದಿಯಲ್ಲಿರುವ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ನಂತರ ಮತ್ತೆ 50 ಅಡಿ ದೂರದಲ್ಲಿ ಪಲ್ಟಿಯಾಗಿ ಬಿದ್ದಿದೆ.
ಗದಗನಿಂದ ಹಡಗಲಿ ತಾಲೂಕಿನ ಹಕ್ಕಂಡಿ ಗ್ರಾಮದ ಕಡೆಗೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಮೂರು ಪಲ್ಟಿ ಹೊಡೆದು ಸುಮಾರು 100 ಅಡಿ ದೂರಕ್ಕೆ ಬಿದ್ದಿದೆ. ಸೇತುವೆಗೆ ಡಿಕ್ಕಿ ಹೊಡೆದ ಕಾರು, ಸೇತುವೆ ಮೇಲೆ ಸುಮಾರು 50 ಅಡಿ ಮುಂದೆ ಹೋಗಿ ರಸ್ತೆ ಬದಿಯಲ್ಲಿರುವ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ನಂತರ ಮತ್ತೆ 50 ಅಡಿ ದೂರದಲ್ಲಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಕಾರು ಚಲಾಯಿಸುತ್ತಿದ್ದ ಮಾಲೀಕ ಶಿವನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಕಾರು ಮಾಲೀಕ ಶಿವನಗೌಡ ಅವರನ್ನು ಗದಗನ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.