ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕು ನಿಯಂತ್ರಿಸಲು ಪರಿಣಾಮಕಾರಿ ಕ್ರಮಕ್ಕೆ ಸೂಚಿಸಿದ ಸಚಿವ ಸಿಸಿಪಾ - ಅಧಿಕಾರಿಗಳ ಜೊತೆ ಸಿಸಿ ಪಾಟೀಲ್​ ಚರ್ಚೆ

ಹೊರ ಜಿಲ್ಲೆಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಬೇಕು. ಸೋಂಕು ದೃಢಪಟ್ಟ ಪ್ರಕರಣಗಳಲ್ಲಿ ತಕ್ಷಣ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳ ಗಂಟಲು ದ್ರವ ಪರೀಕ್ಷೆ, ಅವರನ್ನು ಪ್ರತ್ಯೇಕವಾಗಿರಿಸುವ ಕ್ರಮಗಳನ್ನು ಜವಾಬ್ದಾರಿಯಿಂದ ಪಾಲಿಸಬೇಕು..

ccpatil-meeting-with-navalagund-taluk-officers
ಸಚಿವ ಸಿ ಸಿ ಪಾಟೀಲ್

By

Published : Jul 6, 2020, 9:20 PM IST

ಗದಗ :ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಕೊವಿಡ್-19 ಸೋಂಕು ನಿಯಂತ್ರಣ ಕುರಿತು ನರಗುಂದ ತಾಲೂಕಿನ ಅಧಿಕಾರಿಗಳ ಸಭೆ ನಡೆಸಿದರು.

ಕೊರೊನಾ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ವಾರ್ಡ್‌ ಮಟ್ಟದಲ್ಲಿ ಈ ಸೋಂಕು ನಿಯಂತ್ರಣಕ್ಕೆ ಜನರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಕೈಗಳನ್ನು ಆಗಾಗ ಸ್ವಚ್ಛಗೊಳಿಸುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹೊರ ಜಿಲ್ಲೆಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಬೇಕು. ಸೋಂಕು ದೃಢಪಟ್ಟ ಪ್ರಕರಣಗಳಲ್ಲಿ ತಕ್ಷಣ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳ ಗಂಟಲು ದ್ರವ ಪರೀಕ್ಷೆ, ಅವರನ್ನು ಪ್ರತ್ಯೇಕವಾಗಿರಿಸುವ ಕ್ರಮಗಳನ್ನು ಜವಾಬ್ದಾರಿಯಿಂದ ಪಾಲಿಸಬೇಕು ಎಂದು ಸಚಿವರು ಹೇಳಿದರು.

ತಾಲೂಕಿನ ಕಂಟೇನ್ಮೆಂಟ್ ಪ್ರದೇಶಗಳ ಜನರ ಅವಶ್ಯಕ ವಸ್ತುಗಳ ಪೂರೈಕೆ, ಸಾಂಸ್ಥಿಕ ದಿಗ್ಬಂಧನದಲ್ಲಿ ಇರುವವರಿಗೆ ಸರಿಯಾದ ಉಟೋಪಹಾರದ ವ್ಯವಸ್ಥೆ ಕುರಿತು ಚರ್ಚಿಸಿದ ಸಚಿವರು, ತಾಲೂಕಿನ ಕೋವಿಡ್-19 ನಿಯಂತ್ರಣ ಪರಿಣಾಮಕಾರಿಯಾಗಿ ಜರುಗಿಸಲು ಅಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಸಮರ್ಪಕ ನಿರ್ವಹಣೆ ನಡೆಸಲು ಮತ್ತು ಯಾವುದೇ ಇಲಾಖೆಯ ಕೊವಿಡ್-19 ವಾರಿಯರ್ಸ್ ಇರಲಿ ಅವರು ತಮ್ಮ ಸುರಕ್ಷತೆಗೂ ಕಡ್ಡಾಯವಾಗಿ ಗಮನ ನೀಡಲು ಸೂಚಿಸಿದರು.

ABOUT THE AUTHOR

...view details