ಗದಗ : ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸಂಖ್ಯೆ ಬಗ್ಗೆ ನಿಗಾವಹಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ್ನ ಅಂಬೇಡ್ಕರ್ ಭವನದಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಪ್ರದೀಪ ಶೆಟ್ಟರ್ ಪರ ಮತಯಾಚನೆ ಕಾರ್ಯಕ್ರಮಕ್ಕೆ ಮುನ್ನ ಮಾತನಾಡಿದ ಅವರು, ಚಿಕ್ಕಮಗಳೂರಿನ ಶಿಕ್ಷಕರೊಬ್ಬರಲ್ಲಿ ಕೊರೊನಾ ಕಂಡು ಬಂದಿತ್ತು. ಈಗಾಗಲೇ 400 ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 68 ಮಕ್ಕಳಿಗೆ ಪಾಸಿಟಿವ್ ಬಂದಿದೆ.
ಶಾಲಾ-ಕಾಲೇಜಿನಲ್ಲಿ ಯಾರಿಗಾದರೂ ಲಕ್ಷಣಗಳಿದ್ದರೆ ಕೂಡಲೇ ಚೆಕ್ ಮಾಡೋದಕ್ಕೆ ಹೇಳಿದ್ದೇವೆ ಎಂದರು. ಎಲ್ಲೆಲ್ಲಿ ಹಾಸ್ಟೆಲ್ಗಳಿವೆ, ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದಾರೋ, ಅಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.