ಕರ್ನಾಟಕ

karnataka

ETV Bharat / state

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ.. ಓರ್ವ ಸ್ಥಳದಲ್ಲೇ ಸಾವು! - gadaga death latest news

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ರಾಮನಗೌಡ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮದ ಬಳಿ ನಡೆದಿದೆ.‌

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು!
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು!

By

Published : Jan 3, 2020, 4:08 PM IST

ಗದಗ:ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮದ ಬಳಿ ನಡೆದಿದೆ.‌

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ.. ಓರ್ವ ಸ್ಥಳದಲ್ಲೇ ಸಾವು!

ರಾಮನಗೌಡ (27) ಅನ್ನೋ ಬೈಕ್ ಸವಾರ ಮೃತ ದುರ್ದೈವಿ. ಈತ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಳೇಕಲ್ ಗ್ರಾಮದವನೆಂದು ತಿಳಿದು ಬಂದಿದೆ. ಗಜೇಂದ್ರಗಡದಿಂದ ರೋಣಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಕಾರ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಕುರಿತು ಗಜೇಂದ್ರಗಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details