ಕರ್ನಾಟಕ

karnataka

ETV Bharat / state

ಗದಗ: ನಾಲ್ವರು ವಿದ್ಯಾರ್ಥಿ, ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಸೋಂಕು

ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಸುಮಾರು 175ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸ್ತವ್ಯ ಇದ್ದಾರೆ. ಶಾಲೆಯಲ್ಲಿರುವ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಪಾಲಕರಲ್ಲಿ ಆತಂಕ ಮನೆ ಮಾಡಿದೆ.

By

Published : Mar 27, 2021, 10:54 PM IST

Corona infection of four student one cook in gadaga
ನಾಲ್ವರು ವಿದ್ಯಾರ್ಥಿ, ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಸೋಂಕು

ಗದಗ: ಜಿಲ್ಲೆಯ ರೋಣ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಹಾಗೂ ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಓದಿ: ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ: ಸ್ವಪಕ್ಷದ ವಿರುದ್ಧ ಸಚಿವ ಮಾಧುಸ್ವಾಮಿ ಅಸಮಾಧಾನ

ವಸತಿ ಶಾಲೆಯ ಬಹುತೇಕ ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಜ್ವರದಿಂದ ಅಸ್ವಸ್ಥವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಎಲ್ಲ ಮಕ್ಕಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಸುಮಾರು 175ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸ್ತವ್ಯ ಇದ್ದಾರೆ. ಶಾಲೆಯಲ್ಲಿರುವ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಪಾಲಕರಲ್ಲಿ ಆತಂಕ ಮನೆ ಮಾಡಿದೆ.

ಅಲ್ಲದೇ, ಕೊರೊನಾ ಎರಡನೇ ಅಲೆ ಗದಗ ಜಿಲ್ಲೆಗೂ ವ್ಯಾಪಿಸುತ್ತಿರುವ ಶಂಕೆ ವ್ಯಕ್ತವಾಗುತ್ತಿದ್ದು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತದಿಂದ ಕಂಟೈನ್ಮೆಂಟ್ ಝೋನ್ ಮಾಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ABOUT THE AUTHOR

...view details