ಕರ್ನಾಟಕ

karnataka

ETV Bharat / state

ಕೊರೊನ ಭೀತಿ: ತುಮಕೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ 144 ಸೆಕ್ಷನ್​​ ಜಾರಿ - ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ಕೊರೊನಾ ವೈರಸ್​ ಹರಡದಂತೆ ತಡೆಗಟ್ಟುವ ಸಲುವಾಗಿ ತುಮಕೂರು, ಗದಗ, ಹಾವೇರಿಯಲ್ಲಿ 144 ಸೆಕ್ಷನ್​ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

144 section ban imposed
ನಿಷೇಧಾಜ್ಞೆ ಜಾರಿ

By

Published : Mar 20, 2020, 9:04 PM IST

ತುಮಕೂರು:ಕೋವಿಡ್ -19 ಎಂಬ ಅಪಾಯಕಾರಿ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಸಿಆರ್​​ಪಿಸಿ 1973ರ ಕಲಂ 144 ರ ಅಡಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಮಾರ್ಚ್ 20ರಿಂದ 31ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ನಿಷೇಧಾಜ್ಞೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಉಲ್ಲಂಘಿಸುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.

ತುಮಕೂರು, ಗದಗ, ಹಾವೇರಿಯಲ್ಲಿ 144 ಸೆಕ್ಷನ್ ಜಾರಿ

ಮಾರ್ಚ್​ 31ರವರೆಗೆ ಗದಗ ಜಿಲ್ಲೆಯಲ್ಲಿ 144 ಸೆಕ್ಷನ್​​:

ರಾಜ್ಯ ಸರ್ಕಾರ ನೀಡಿರುವ ಆದೇಶದನ್ವಯ ಗದಗ ಜಿಲ್ಲೆಯಾದ್ಯಂತ ಸೆಕ್ಷನ್​​ 144ರ ಅನ್ವಯ ಪ್ರತಿಬಂಧಕಾಜ್ಞೆ ವಿಧಿಸಿ ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ, ಕಾಲೇಜು ಹಾಗೂ ಕೋಚಿಂಗ್ ಸೆಂಟರ್ ಸೇರಿ ಎಲ್ಲಾ ತರಹದ ಶಿಕ್ಷಣ ಸಂಸ್ಥೆಗಳಿಗೆ (ಪರೀಕ್ಷೆ ಹೊರತುಪಡಿಸಿ) ರಜೆ ಘೋಷಿಸಿದೆ. ಜಿಲ್ಲೆಯಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಹ ಸ್ಥಳಗಳಾದ ಸಂತೆ, ಜಾತ್ರೆಗಳನ್ನು ಮುಂದೂಡಲಾಗಿದೆ. ಗದಗ ಜಿಲ್ಲೆಯಾದ್ಯಂತ ಚಿತ್ರಮಂದಿರ, ನಾಟಕ ಪ್ರದರ್ಶನ, ಉದ್ಯಾನ, ಹೋಟೆಲ್​​​, ಢಾಬಾ ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಧಾರ್ಮಿಕ ಕೇಂದ್ರಗಳ ಉತ್ಸವ, ಜಾತ್ರೆಗಳನ್ನು ಆಯಾ ಕೇಂದ್ರಗಳ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿ ಸರಳವಾಗಿ ಆಚರಿಸಬೇಕು. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ವಸತಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು, ಶಿಗ್ಗಾಂವಿ, ಹಾನಗಲ್ ತಾಲೂಕಿನಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಸವಣೂರು ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 31ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಜಾತ್ರೆ, ಸಂತೆ, ಉರುಸ್​​ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಜೊತೆಗೆ 24X7 ಕೊರೊನಾ ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ. ಹೊರಗಡೆಯಿಂದ ಬಂದವರ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ABOUT THE AUTHOR

...view details