ಗದಗ:ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆ ಪಿಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಪಿಎಸ್ಐಗೆ ಕೊರೊನಾ ಪಾಸಿಟಿವ್: ಗಜೇಂದ್ರಗಡ ಪೊಲೀಸ್ ಠಾಣೆ ಸೀಲ್ಡೌನ್ - Gadag News
ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆ ಪಿಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್ಡೌನ್ ಮಾಡಲಾಗಿದೆ. ಸಾರ್ವಜನಿಕರಿಗೆ ದೂರು ಸಲ್ಲಿಸಲು ಬೇರೆ ವ್ಯವಸ್ಥೆ ಕಲ್ಪಿಸಲಾಗಿದೆ.
ಪಿಎಸ್ಐಗೆ ಕೊರೊನಾ ಪಾಸಿಟಿವ್...ಗಜೇಂದ್ರಗಡ ಪೊಲೀಸ್ ಠಾಣೆ ಸೀಲ್ಡೌನ್
ಪಿಎಸ್ಐ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ ಸಿಬ್ಬಂದಿಗೂ ಕೂಡ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಎಂದು ಬಂದಿದೆ. ಪಿಎಸ್ಐ ಒಂದು ವಾರದಿಂದ ಕುಟುಂಬದಿಂದ ದೂರವಿದ್ದು, ಸೀಲ್ಡೌನ್ ಪ್ರದೇಶ ಸೇರಿದಂತೆ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಅವರಿಗೆ ಕೆಮ್ಮು ಕಾಣಿಸಿಕೊಂಡಿದ್ದು, ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ.
ಗಜೇಂದ್ರಗಡ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್ಡೌನ್ ಮಾಡಲಾಗಿದ್ದು, ಸಾರ್ವಜನಿಕರಿಗೆ ದೂರು ಸಲ್ಲಿಸಲು ಬೇರೆ ವ್ಯವಸ್ಥೆ ಮಾಡಲಾಗಿದೆ.