ಗದಗ: ಇಲ್ಲಿನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗೂ ಕೊರೊನಾ ಸೋಂಕು ತಗುಲಿದ್ದು, ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಕೊರೊನಾ ಸೇವೆಯಲ್ಲಿದ್ದ ಓರ್ವ ಕಾನ್ಸ್ಸ್ಟೇಬಲ್ಗೆ ಸೋಂಕು ದೃಢವಾಗಿದೆ. ಹೀಗಾಗಿ ನಗರ ಠಾಣೆ ಅಧಿಕಾರಿಗಳು, ಸಿಬ್ಬಂದಿಗೂ ನಡುಕ ಶುರುವಾಗಿದೆ.

ಸೋಂಕಿತ ಕಾನ್ಸ್ಟೇಬಲ್, ಜ್ವರ ಕಾಣಿಸಿಕೊಂಡ ಹಿನ್ನೆಲೆ ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ತೆರಳಿದ್ದರು. ಆಗ ಪರೀಕ್ಷೆ ನಡೆಸಿದಾಗ ವರದಿ ಪಾಸಿಟಿವ್ ಬಂದಿದೆ.
ಇನ್ನು ಗದಗ ರೈಲ್ವೆ ಪೊಲೀಸ್ ಕಾನ್ಸ್ಟೇಬಲ್ಗೂ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ರೈಲ್ವೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೂ ಕೊರೊನಾ ಭಯ ಶುರುವಾಗಿದೆ.